ಮಂಗಳೂರು: ಅಕ್ರಮ ಮರಳು ಅಡ್ಡೆಗೆ ಪೊಲೀಸ್‌ ದಾಳಿ ➤ 3.70 ಲಕ್ಷ ರೂ. ಮೌಲ್ಯದ ಸೊತ್ತು ವಶ

(ನ್ಯೂಸ್ ಕಡಬ)newskadaba.com  ಮಂಗಳೂರು, ಮೇ, 26. ಕಂಕನಾಡಿ ನಗರ ಠಾಣೆ ಪೊಲೀಸರು ಫೈಸಲ್‌ ನಗರದ ನೇತ್ರಾವತಿ ನದಿ ಕಿನಾರೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ 10 ಲೋಡ್‌ ಮರಳು, ಒಂದು ಜೆಸಿಬಿಯನ್ನು ವಶಕ್ಕೆ ಪಡೆದುಕೊಂಡಿದ್ದು, ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ ಒಟ್ಟು 3.70 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಕಂಕನಾಡಿ ನಗರ ಪೊಲೀಸ್‌ ಠಾಣಾ ಪೊಲೀಸ್‌ ಉಪನಿರೀಕ್ಷಕಿ ಜ್ಯೋತಿ ಎನ್‌.ಎ. ರೌಂಡ್ಸ್‌ ನಲ್ಲಿದ್ದ ವೇಳೆ ಫೈಸಲ್‌ ನಗರದ ನೇತ್ರಾವತಿ ನದಿ ಕಿನಾರೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

 

Scroll to Top