ಬೆಳ್ತಂಗಡಿ: ಹರೀಶ್ ಪೂಂಜಾ ಪರ ಪ್ರಚಾರ ➤ ಗ್ರಾಮ ಪಂಚಾಯತ್ ಸಿಬ್ಬಂದಿ ಅಮಾನತು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ.26. ಚುನಾವಣಾ ಪ್ರಚಾರ ಹಾಗೂ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.


ಗ್ರಾಮ ಪಂಚಾಯತ್ ಸಿಬ್ಬಂದಿ ನಾಗೇಶ್ ಎಂಬವರನ್ನು ಅಮಾನತು ಮಾಡಿ ಉಜಿರೆ ಪಂಚಾಯತ್ ಪಿಡಿಒ ಪ್ರಕಾಶ್ ಶೆಟ್ಟಿ ಆದೇಶ ಹೊರಡಿಸಿದ್ದಾರೆ. ಸರ್ಕಾರಿ ಹುದ್ದೆಯಲ್ಲಿರುವವರು ಯಾವುದೇ ರಾಜಕೀಯ ಪಕ್ಷದ ಪರವಾಗಿ ತೊಡಗಿಸಿಕೊಳ್ಳಬಾರದು ಎಂದು ನಿಯಮವಿದ್ದರೂ ಅದನ್ನು‌ ಮೀರಿ ಬಿಜೆಪಿ ಪಕ್ಷದ ಅಭ್ಯರ್ಥಿಯ ಪರವಾಗಿ ಮತಯಾಚನೆ ಮತ್ತು ವಿಜಯೋತ್ಸವದಲ್ಲಿ ಭಾಗಿಯಾಗಿದ್ದಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ.

Also Read  ಉಡುಪಿ: ಬೈಕ್ ಗೆ ಲಾರಿ ಢಿಕ್ಕಿ ➤ ಸಬ್ ಇನ್ಸ್ ಪೆಕ್ಟರ್ ಮೃತ್ಯು.!

error: Content is protected !!
Scroll to Top