ವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ದುಷ್ಕರ್ಮಿಗಳು.!➤ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ರಾಯಚೂರು,ಮೇ.27 ವಿವಾಹಿತೆ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ರಾಯಚೂರಿನಲ್ಲಿ ನಡೆದಿದೆ.ಕ್ಯಾಂಪಿನ ಹೊರವಲಯದಲ್ಲಿ 46 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು. ವಿರೋಧ ವ್ಯಕ್ತಪಡಿಸಿದ ಮಹಿಳೆ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ,ಆರೋಪಿಗಳು ಪರಾರಿಯಾಗಿದ್ದಾರೆ.

ಅಸ್ವಸ್ಥರಾಗಿದ್ದ ಮಹಿಳೆಯನ್ನು ಗಮನಿಸಿದ ಜನ ಪೊಲೀಸರಿಗೆ ಮಾಹಿತಿ ನೀಡಿ,ಬಳಿಕ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ.ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿ ಮಾಳಪ್ಪನನ್ನು ಬಂಧಿಸಲಾಗಿದೆ.

 

 

Scroll to Top