ನೂತನ ಸ್ಪೀಕರ್ ಖಾದರ್ ವಿರುದ್ಧ ಅವಹೇಳನಾಕಾರಿ ಪೋಸ್ಟ್ ➤ ಶ್ರೀರಾಮಸೇನೆ ಮುಖಂಡನ ವಿರುದ್ಧ ದೂರು

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಮೇ.27. ನೂತನ ಸಭಾಧ್ಯಕ್ಷರಾದ ಉಳ್ಳಾಲ ಕ್ಷೇತ್ರದ ಶಾಸಕ ಯು.ಟಿ ಖಾದರ್ ವಿರುದ್ದ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಶ್ರೀರಾಮಸೇನೆ ಮುಖಂಡನ ವಿರುದ್ಧ ಕೇಸ್ ದಾಖಲಾಗಿದೆ.


ಪ್ರೀತೇಶ್ ಚಿಕ್ಕಮಗಳೂರು ಎಂಬಾತ ಖಾದರ್ ವಿರುದ್ಧ ಪೋಸ್ಟ್ ಮಾಡಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಚಿಕ್ಕಮಗಳೂರು ನಗರದ ಸೆನ್ ಠಾಣೆಯಲ್ಲಿ ಪ್ರೀತೇಶ್ ವಿರುದ್ದ ದೂರು ಸಲ್ಲಿಸಿದ್ದಾರೆ.ಈ ಕೂಡಲೇ ಇತನ ವಿರುದ್ದ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Also Read  ಕಡಬದಲ್ಲಿ ಆನೆ ದಾಳಿ ಪ್ರಕರಣ; ವಿಧಾನ ಸಭೆ ಅಧಿವೇಶನದ ವಿಷಯ ಪ್ರಸ್ತಾಪ ➤ ಶಾಸಕ ಯು.ಟಿ ಖಾದರ್

error: Content is protected !!
Scroll to Top