ಅಂಗನವಾಡಿ ಕೇಂದ್ರಗಳಿಗೆ ಬಿಡುಗಡೆಯಾಗದ ಅನುದಾನ.!➤ಕಾರ್ಯಕರ್ತೆಯರಿಗೆ ಮೊಟ್ಟೆ ಸಾಲದ ಹೊರೆ

(ನ್ಯೂಸ್ ಕಡಬ)newskadaba.com ಬೆಳಗಾವಿ,ಮೇ.27 ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳಿಗೆ ಮೊಟ್ಟೆ ವಿತರಿಸುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಎರಡು ತಿಂಗಳಿಂದ ಅನುದಾನವೇ ಬಿಡುಗಡೆಯಾಗಿಲ್ಲ. ಸಾಲದ ರೂಪದಲ್ಲಿ ಕಿರಾಣಿ ಅಂಗಡಿಗಳಿಂದ ಮೊಟ್ಟೆ ಖರೀದಿಸಿ ವಿತರಿಸಲಾಗುತ್ತಿದೆ.

ಕಾರ್ಯಕರ್ತೆಯರು ಸ್ಥಳೀಯವಾಗಿ ಮೊಟ್ಟೆ ಖರೀದಿಸಿ, ಫಲಾನುಭವಿಗಳಿಗೆ ವಿತರಿಸುತ್ತಿದ್ದರು. ಇದಕ್ಕೆ ವೆಚ್ಚವಾದ ಹಣವನ್ನು ಅಂಗನವಾಡಿ ಕೇಂದ್ರಗಳ ಬಾಲ ವಿಕಾಸ ಸಲಹಾ ಸಮಿತಿ ಹಾಗೂ ಕಾರ್ಯಕರ್ತೆಯರ ಜಂಟಿ ಖಾತೆಗೆ ನಿಯಮಿತವಾಗಿ ಜಮೆ ಮಾಡಲಾಗುತ್ತಿತ್ತು. ಕೆಲವೊಮ್ಮೆ ಮುಂಗಡವಾಗಿಯೇ ಹಣ ಕೈ ಸೇರುತ್ತಿತ್ತು. ಆದರೆ, ವಿಧಾನಸಭೆ ಚುನಾವಣೆ, ಮತ್ತಿತರ ಕಾರಣಗಳಿಂದಾಗಿ ಏಪ್ರಿಲ್‌ ಮತ್ತು ಮೇ ತಿಂಗಳ ಅನುದಾನ ಈವರೆಗೂ ಬಿಡುಗಡೆಯಾಗಿಲ್ಲ.

Also Read  ಕೇದಾರನಾಥ ಯಾತ್ರೆ ಏ.25ರಿಂದ ಆರಂಭ..!   ➤ ಟೋಕನ್‌ ವ್ಯವಸ್ಥೆ ಜಾರಿ!

 

error: Content is protected !!
Scroll to Top