ಮುಂದುವರಿದ ಮಹದಾಯಿ ಬಿಕ್ಕಟ್ಟು ► ಜನವರಿ 27 ರಂದು ಸರ್ವ ಪಕ್ಷಗಳ ಸಭೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.18. ಮಹದಾಯಿ ನೀರಿನ ವಿಚಾರದಲ್ಲಿ ಎರಡು ರಾಜ್ಯಗಳ ನಾಯಕರ ನಡುವೆ ಆರೋಪ – ಪ್ರತ್ಯಾರೋಪ ನಡೆಯುತ್ತಿರುವುದರ ಮಧ್ಯೆಯೇ ಮಹದಾಯಿ ವಿಚಾರವಾಗಿ ಚರ್ಚಿಸಲು ಸರ್ವ ಪಕ್ಷಗಳ ಸಭೆಯನ್ನು ರಾಜ್ಯ ಸರಕಾರ ಕರೆದಿದೆ.

ಜನವರಿ 27 ರಂದು ವಿಧಾನಸೌಧದಲ್ಲಿ ನಡೆಯಲಿರುವ ಸರ್ವ ಪಕ್ಷಗಳ ಸಭೆಗೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರಿಗೆ ಆಹ್ವಾನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷವು ಸರ್ವ ಪಕ್ಷಗಳ ಜೊತೆ ಸಭೆ ಸೇರಿ ಮಹದಾಯಿ ವಿಚಾರವಾಗಿ ಮಹತ್ವದ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

Also Read  ಟರ್ಕಿ, ಸಿರಿಯಾದಲ್ಲಿ ಪ್ರಬಲ ಭೂಕಂಪನಕ್ಕೆ 568 ಮಂದಿ ಮೃತ್ಯು

error: Content is protected !!
Scroll to Top