ರಾಜ್ಯದಲ್ಲಿ ಹೆಚ್ಚಾಗಲಿದೆ ಮಳೆಯ ಅಬ್ಬರ.!➤ ಹವಾಮಾನ ಇಲಾಖೆ ಸೂಚನೆ

(ನ್ಯೂಸ್ ಕಡಬ)newskadaba.com ಬೆಂಗಳೂರು ,ಮೇ.29  ಮೇ ತಿಂಗಳ ಅಂತ್ಯಕ್ಕೆ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ದಕ್ಷಿಣ ಒಳನಾಡಿನ 10 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ.ಜೂನ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ  ಮಳೆಯ ಅಬ್ಬರ ಹೆಚ್ಚಾಗಲಿದ್ದು, ಮೇ 31 ಮತ್ತು ಜೂನ್ 1ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದೆ. ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿಯೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

Scroll to Top