ಇಂದಿನಿಂದ 2023- 24 ನೇ ಸಾಲಿನ ಶೈಕ್ಷಣಿಕ ವರ್ಷ ➤ ಮೇ 31ರಿಂದ ತರಗತಿ ಆರಂಭ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.29. ಇಂದಿನಿಂದ 2023- 24 ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಶಾಲೆಗಳು ತೆರೆಯಲಿದ್ದು, ಮೇ.31 ರಿಂದ ರಾಜ್ಯಾದಾದ್ಯಂತ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಲಿದೆ ಎಂದು ವರದಿ ತಿಳಿಸಿದೆ.


ಮೇ.29 ಮತ್ತು 30 ರಂದು ಶಾಲೆಗಳನ್ನು ಸಂಪೂರ್ಣ ಸ್ವಚ್ಛಗೊಳಿಸಿ, ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ ಸಿದ್ದತೆ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಸೂಚಿಸಿದೆ.

error: Content is protected !!
Scroll to Top