ವಿವಾಹವಾಗಬೇಕಿದ್ದ ವಧು ಅಗ್ನಿ ಅವಘಡದಲ್ಲಿ ಮೃತ್ಯು

(ನ್ಯೂಸ್ ಕಡಬ)newskadaba.com ವಾಷಿಂಗ್ಟನ್, ಮೇ.29. ರೀಡ್ಸ್‌ಬರ್ಗ್ ಮನೆಯ ಎರಡನೇ ಮಹಡಿಯಲ್ಲಿ ವಧು  ನಿದ್ರಿಸುತ್ತಿದ್ದ ವೇಳೆ ಅಗ್ನಿ ಅವಘಡ ಸಂಭವಿಸಿ ಮೃತಪಟ್ಟಿದ್ದಾಳೆ ಎಂದು ವರದಿ ತಿಳಿಸಿದೆ.

ಪೈಜ್ ರಡ್ಡಿ (19) ವರ್ಷದ ಯುವತಿ  ಈ ಘಟನೆಯಲ್ಲಿ ಮೃತಪಟ್ಟ ವಧು ಎಂದು ಗುರುತಿಸಲಾಗಿದೆ. ಈ ಘಟನೆ ಅಮೇರಿಕಾದ ವಿಸ್ಕಾನ್ಸಿನ್‌ ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಎರಡನೇ ಮಹಡಿಯಲ್ಲಿ  ನಿದ್ರಿಸುತ್ತಿದ್ದ ವೇಳೆ ಮನೆಗೆ ಬೆಂಕಿ ಹತ್ತಿಕೊಂಡಿದ್ದು, ಹೊಗೆಯಿಂದಾಗಿ ಉಸಿರುಗಟ್ಟಿ ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಚಿಕಿತ್ಸೆ ಫ‌ಲಕಾರಿಯಾಗದೆ ಯುವತಿ  ಸಾವನ್ನಪ್ಪಿದ್ದಾಳೆ ಎಂದು ವರದಿಗಳು ತಿಳಿಸಿವೆ.

 

Scroll to Top