(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.29 ಜಯನಗರ ಶಾಂಪಿಗ್ ಕಾಂಪ್ಲೇಕ್ಸ್ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ಲೂಟಿ ಮಾಡಲಾಗಿದೆ ಎಂಬ ಆರೋಪ ಬಿಬಿಎಂಪಿ ಅಧಿಕಾರಿಗಳು ಹಾಗೂ ಮಾಜಿ ಶಾಸಕರ ವಿರುದ್ಧ ಕೇಳಿಬಂದಿದೆ. 15 ರಿಂದ 20 ಕೋಟಿ ಲೂಟಿ ಮಾಡಲಾಗಿದೆ ಎನ್ನಲಾಗುತ್ತಿದೆ.
ಜಯನಗರ ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗುತ್ತಿದ್ದಂತೆ ನೂತನ ಶಾಸಕ ರಾಮಮೂರ್ತಿ ಭ್ರಷ್ಟರ ಹಿಂದೆ ಬಿದ್ದಿದ್ದಾರೆ. ಜಯನಗರ ವಾಣಿಜ್ಯ ಸಂಕೀರ್ಣದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಮಾಡಿ ಕಾನೂನು ಬಾಹಿರವಾಗಿ ಹಂಚಿಕೆ ಮಾಡಿ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ ಮಾಡಿದ್ದಾರೆ ಎಂದಿದ್ದಾರೆ. ಹೀಗಾಗಿ ಶಾಸಕ ರಾಮಮೂರ್ತಿ, ಆಯುಕ್ತರಿಗೆ ಹಾಗೂ ಲೋಕಾಯುಕ್ತರಿಗೆ ದೂರು ಸಲ್ಲಿಸಲು ಮುಂದಾಗಿದ್ದಾರೆ.
Also Read ಕಡಬ ಸಿಎ ಬ್ಯಾಂಕ್ ನಿವ್ವಳ 1.89ಕೋಟಿ ಲಾಭ ► ಗ್ರಾಹಕರ ಅನುಕೂಲಕ್ಕೆ ಸೇಫ್ ಲಾಕರ್ ಸೌಲಭ್ಯ ಶೀಘ್ರದಲ್ಲಿ ಆರಂಭ