ಪಾಕ್‌ನಲ್ಲಿ ಮರ್ಯಾದಾ ಹತ್ಯೆ➤ ಮಗಳನ್ನು ಜೀವಂತ ಸುಟ್ಟು ಹಾಕಿದ ತಂದೆ

 (ನ್ಯೂಸ್ ಕಡಬ) newskadaba.com. ಪಾಕಿಸ್ತಾನ,ಮೇ.27.   ಪಂಜಾಬ್ ಪ್ರಾಂತ್ಯದಲ್ಲಿ 20 ವರ್ಷದ ಯುವತಿಯನ್ನು ಕುಟುಂಬದ ಗೌರವದ ಹೆಸರಿನಲ್ಲಿ ಸಜೀವ ದಹನ ಮಾಡಿರುವ ಘಟನೆ ನಡೆದಿದೆ.

ಲಾಹೋರ್‌ನಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಜಾಂಗ್ ಜಿಲ್ಲೆಯ ಗರ್ ಮಹಾರಾಜದಲ್ಲಿ ಈ ಘಟನೆ ನಡೆದಿದೆ. ರಜಬ್ ಅಲಿ ಎಂಬಾತ ತನ್ನ ಮಕ್ಕಳಾದ ಜಬ್ಬಾರ್, ಅಮೀರ್ ಮತ್ತು ಇತರ ಕೆಲವು ಕುಟುಂಬ ಸದಸ್ಯರೊಂದಿಗೆ ಸೇರಿಕೊಂಡು ತಮ್ಮ ಮಗಳನ್ನು ಸುಟ್ಟು ಹಾಕಿದ್ದಾನೆ. ಇದಕ್ಕೂ ಮುನ್ನ ಆಕೆಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ತನಿಖಾಧಿಕಾರಿ ಮುಹಮ್ಮದ್ ಅಜಮ್ ಪಾಕ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Also Read  ನವೆಂಬರ್ 24ರಂದು ನಗರಾಭಿವೃದ್ಧಿ ಸಚಿವರಿಂದ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

ಯುವತಿ ತಾನು ಪ್ರೀತಿಸಿದ ಪುರುಷನನ್ನು ಮದುವೆಯಾಗಲು ಬಯಸಿದ್ದಳು. ಸಜೀವ ದಹನಕ್ಕೆ ಒಂದು ದಿನ ಹಿಂದೆ ಆಕೆ ತನ್ನ ಪ್ರಿಯಕರನ ಭೇಟಿಗಾಗಿ ಮನೆಯಿಂದ ಹೊರಟು ಹೋಗಿದ್ದಳು. ಅಲ್ಲದೇ ಅಲ್ಲಿ ಅವಳು ಆತನೊಂದಿಗೆ ಸ್ವಲ್ಪ ಸಮಯ ಕಳೆದಿದ್ದಳು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಹೀಗಾಗಿ ಕುಟುಂಬಕ್ಕೆ ಅಗೌರವ ತಂದಿದ್ದಾಳೆ ಎಂದು ಕುಟುಂಬದ ಸದಸ್ಯರು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.

ತದನಂತರ ಸಂತ್ರಸ್ತೆಯನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಆದರೆ ಅದಾಗಲೇ ತೀವ್ರ ಸುಟ್ಟ ಗಾಯಗಳಿಂದ ನರಳುತ್ತಿದ್ದ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

error: Content is protected !!
Scroll to Top