(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.29 ನಗರದ ಚೌಡೇಶ್ವರಿನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತ ರವಿ ಅಲಿಯಾಸ್ ಮತ್ತಿ ರವಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರಿನ ಲಗ್ಗೆರೆ ಸಮೀಪದ ಚೌಡೇಶ್ವರಿ ನಗರದ ಹಳ್ಳಿ ರುಚಿ ಹೋಟೆಲ್ ಮುಂಭಾಗ ರವಿ ಅಲಿಯಾಸ್ ಮತ್ತಿ ರವಿಯನ್ನು ದುರ್ಷರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದರು.ಈ ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ನಂದಿನಿ ಲೇಔಟ್ ಠಾಣೆ ಪೊಲೀಸರು, ಮಂಜ, ಸ್ಪಾಟ್ ನಾಗ, ಗೋಪಿ ಸೇರಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ.
