(ನ್ಯೂಸ್ ಕಡಬ) newskadaba.com ಮಂಗಳೂರು, ಜ.19. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಲ್ಲಬೆಟ್ಟು, ನೀರುಮಾರ್ಗ, ಕಮ್ಮಾಜೆ, ಗುರುಪುರ ಬೆಳ್ತಂಗಡಿಯ ಮಚ್ಚಿನ, ಮುಂಡಾಜೆ, ಹೊಸಂಗಡಿ ಬಂಟ್ವಾಳ ತಾಲೂಕಿನ ವಗ್ಗ, ಪುತ್ತೂರು ತಾಲೂಕಿನ ಬಲ್ನಾಡು, ಉಪ್ಪಿನಂಗಡಿ ಹಾಗೂ ಸುಳ್ಯ ತಾಲೂಕಿನ ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ದಿನವನ್ನು ಜನವರಿ 25 ರ ವರಗೆ ವಿಸ್ತರಿಸಲಾಗಿದೆ.
ಪ್ರಸ್ತುತ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, 6 ನೇ ತರಗತಿಯಿಂದ 10 ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರ ಸಾಮಗ್ರಿಗಳನ್ನು ನೀಡಲಾಗುವುದು. ಫೆಬ್ರವರಿ 18 ರಂದು ಬೆಳಗ್ಗೆ 11 ರಿಂದ 1 ರವರೆಗೆ ಆಯಾ ತಾಲೂಕು ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯುವುದು. ಪ್ರವೇಶ ಅರ್ಜಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಛೇರಿ, ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಛೇರಿ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಂದ ಪಡೆದು ಭರ್ತಿ ಮಾಡಿ ಜನವರಿ 25 ರೊಳಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9071881974/ 0824-2451237 ಸಂಪರ್ಕಿಸಲು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾಗೂ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಮಟ್ಟದ ಪ್ರವೇಶ ಪರೀಕ್ಷಾ ಸಮಿತಿ, ದ.ಕ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.