FIR ರದ್ದುಪಡಿಸಲು ಹೈಕೋರ್ಟ್ ಮೆಟ್ಟಿಲೇರಿದ ಅಶ್ವತ್ಥ ನಾರಾಯಣ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.30 “ಉರಿಗೌಡ-ನಂಜೇಗೌಡರು ಟಿಪ್ಪುವನ್ನು ಮುಗಿಸಿದಂತೆ ಸಿದ್ದರಾಮಯ್ಯ ಅವರನ್ನು ಮುಗಿಸಬೇಕು” ಎಂಬ ಬಿಜೆಪಿ ನಾಯಕ, ಮಾಜಿ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಹೇಳಿಕೆ ದಿನದಿಂದ ದಿನಕ್ಕೆ ಹೊಸ ರೂಪ ಪಡೆಯುತ್ತಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಇದೀಗ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಲು ಕೋರಿ ಮಾಜಿ ಸಚಿವ ಹಾಗೂ ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಶಾಸಕ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

 

 

Scroll to Top