ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ ➤ ತಪ್ಪಿದ ಭಾರಿ ಅನಾಹುತ

(ನ್ಯೂಸ್ ಕಡಬ)newskadaba.com  ಬೆಳಗಾವಿ, ಮೇ.30. ಹೊನ್ನಿಹಾಳ ಹಾಗೂ ಬಾಗೇವಾಡಿ ಮಾರ್ಗದ ಮಧ್ಯೆ ಇರುವ ಹೊಲದಲ್ಲಿ ತರಬೇತಿ ವಿಮಾನವೊಂದು ಭೂಸ್ಪರ್ಶವಾಗಿದೆ ಎಂದು ವರದಿ ತಿಳಿಸಿದೆ.

ಬೆಳಗಾವಿ ವಿಮಾನ ನಿಲ್ದಾಣದಿಂದ ತರಬೇತಿ ನಡೆಸುತ್ತಿದ್ದ ಪುಟ್ಟ ವಿಮಾನ ಒಂದು ತಾಲೂಕಿನ ಹೊನ್ನಿಹಾಳ ಹೊರವಲಯದ ಮೋದಗಾ- ಬಾಗೇವಾಡಿ ರಸ್ತೆ ಮಧ್ಯದಲ್ಲಿ ತುರ್ತು ಭೂಸ್ಪರ್ಶವಾಗಿದೆ ಎನ್ನಲಾಗಿದೆ. ಇನ್ನು ಘಟನೆಯಲ್ಲಿ ತರಬೇತುದಾರನ ಕಾಲಿಗೆ ಗಾಯವಾಗಿದೆ.

Scroll to Top