(ನ್ಯೂಸ್ ಕಡಬ)newskadaba.com ಬಿಹಾರ,ಮೇ.30 ಮಧ್ಯಾಹ್ನದ ಬಿಸಿ ಊಟದಲ್ಲಿ ಗೋಸುಂಬೆ ಪತ್ತೆಯಾಗಿದ್ದು, 45ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಬಿಹಾರದ ಸುಪೌಲ್ ಜಿಲ್ಲೆಯಲ್ಲಿ ವರದಿಯಾಗಿದೆ. ಭೀಮಪುರ ಪೊಲೀಸ್ ಠಾಣಾ ವ್ಯಾಪ್ತಿಯ ತುಡಿ ಗ್ರಾಮದ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.
ಮಧ್ಯಾಹ್ನದ ಬಿಸಿ ಊಟ ಸೇವಿಸಿದ ನಂತರ ಅನೇಕ ವಿದ್ಯಾರ್ಥಿಗಳು ವಾಂತಿ ಮತ್ತು ಹೊಟ್ಟೆ ನೋವು ಎಂದು ದೂರಿದ್ದಾರೆ. ಶಾಲೆಯ ಶಿಕ್ಷಕರು ಮತ್ತು ಗ್ರಾಮಸ್ಥರು ತಕ್ಷಣ 45 ಮಕ್ಕಳನ್ನು ಸಾಮಾನ್ಯ ಆರೋಗ್ಯ ಕೇಂದ್ರ ನರಪತಗಂಜ್‌ಗೆ ಚಿಕಿತ್ಸೆಗಾಗಿ ಕರೆದೊಯ್ದರು. ಇವರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
Also Read ನೂಜಿಬಾಳ್ತಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ➤ ಅವಕಾಶಗಳು ಪೂರಕ ಬದುಕಿಗೆ ಮೆಟ್ಟಿಲು - ಸರ್ವೋತ್ತಮ ಗೌಡ