(ನ್ಯೂಸ್ ಕಡಬ)newskadaba.com ಕಲಬುರಗಿ,ಮೇ.30 ಮದುವೆಯಾಗಲು ನಿರಾಕರಿಸಿದ್ದಕ್ಕೆ ಪ್ರಿಯತಮನ ಮೇಲೆ ಮಹಿಳೆ ಬಿಸಿ ನೀರು ಎರಚಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಗಾಯಗೊಂಡವರನ್ನು ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ.
ವಿಜಯ್ ಕುಮಾರ್ ಬಟ್ಟೆ ಮಾರಾಟ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ. ಆತನಿಗೆ ತನ್ನದೇ ಜಿಲ್ಲೆಯ ಮಹಿಳೆಯೊಬ್ಬಳು ಪರಿಚಯವಾಗಿದ್ದಳು. ಇಬ್ಬರ ನಡುವೆ ಉತ್ತಮ ಸ್ನೇಹವಿತ್ತು. ಆದರೆ, ಆಕೆಗೆ ವಿವಾಹವಾಗಿತ್ತು. ಆದರೂ ಅವಳು ಈತನನ್ನು ಪ್ರೀತಿಸುತ್ತಿದ್ದಳು ಮತ್ತು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಳು ಎಂದು ಮೂಲಗಳು ತಿಳಿಸಿವೆ.
ವಿಜಯ್ ಕುಮಾರ್ ಬೇರೆ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ,ವಿಷಯ ತಿಳಿದ ಮಹಿಳೆ ಪ್ರಿಯತಮನ ಮೇಲೆ ಮಹಿಳೆ ಬಿಸಿ ನೀರು ಎರಚಿದ್ದಾಳೆ.ಇನ್ನು ಗಾಯಗೊಂಡ ವಿಜಯ್ ಕುಮಾರ್‌ನನ್ನು ವಿಕ್ಟೋರಿಯಾ ಆಸ್ಪತ್ರಗೆ ದಾಖಲಿಸಲಾಗಿದ್ದು, ಮಹಿಳೆ ವಿರುದ್ಧ ಚಾಮರಾಜಪೇಟೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.