ಬೆಂಗಳೂರಿನ ನೂತನ ಪೊಲೀಸ್‌ ಆಯುಕ್ತರಾಗಿ ಬಿ.ದಯಾನಂದ್‌ ನೇಮಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.30. ಸರ್ಕಾರ ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಹಿರಿಯ ಪೊಲೀಸ್ ಅಧಿಕಾರಿ ಬಿ ದಯಾನಂದ ಅವರನ್ನು ನೇಮಕ ಮಾಡಿದೆ. ಇಂದು ರಾಜ್ಯ ಸರ್ಕಾರ ಈ ಆದೇಶವನ್ನು ಹೊರಡಿಸಿದೆ.

ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಬೆಂಗಳೂರು ನಗರದ ಪೊಲೀಸ್ ಕಮಿಷನರ್ ಆಗಿ ಪ್ರತಾಪ ರೆಡ್ಡಿ ಕಾರ್ಯನಿರ್ವಾಹಣೆ ಮಾಡಿದ್ದರು. ಇದೀಗ ಅವರನ್ನು ಡಿಜಿಪಿ ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.

Also Read  ಡಿ. 30ರಂದು ಸಾಮಾನ್ಯ ಸಭೆ

 

 

error: Content is protected !!
Scroll to Top