ಮಂಗಳೂರು: ಬೆಳ್ಳಂ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ NIA ದಾಳಿ ➤ ದಾಖಲೆಗಳ ಪರಿಶೀಲನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.31. ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್‌‌ಐಎ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ ವೇಣೂರು ಸೇರಿ 16 ಕಡೆಗಳಲ್ಲಿ ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ. ದಾಳಿ ನಡೆಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ, ದಾಖಲೆಗಳನ್ನು ಪರಿಶೀಲಿಸುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಸ್ಪತ್ರೆ ಮತ್ತು ಆಸ್ಪತ್ರೆಯ ಕಚೇರಿಗಳ ಮೇಲೆ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.

Also Read  ದ.ಕ. ಜಿಲ್ಲೆ: ನಾಳೆಯಿಂದ ಎಲ್ಲಾ ದಿನಸಿ ಅಂಗಡಿ, ತರಕಾರಿ,‌ಫ್ರೂಟ್ ಅಂಗಡಿಗಳು 12 ಗಂಟೆಯವರೆಗೆ ಓಪನ್

 

error: Content is protected !!
Scroll to Top