ಬೇಸಿಗೆ ರಜೆ ಮುಕ್ತಾಯ➤ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಇಂದಿನಿಂದ ಆರಂಭ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.31 ಬೇಸಿಗೆ ರಜೆ ಮುಕ್ತಾಯವಾಗಿದ್ದು, ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಆರಂಭವಾಗಲಿವೆ.2023 -24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ಇಂದಿನಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿರಲಿದ್ದು, ಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಬರಮಾಡಿಕೊಳ್ಳಲು ಶಿಕ್ಷಣ ಇಲಾಖೆಯಿಂದ ಸೂಚನೆ ನೀಡಲಾಗಿದೆ.

ಮೊದಲ ದಿನ ಬಿಸಿಯೂಟದಲ್ಲಿ ಸಿಹಿ ವಿತರಿಸಬೇಕು. ಒಂದೆರಡು ಗಂಟೆ ನಂತರ ಶೈಕ್ಷಣಿಕ ತರಗತಿ ಚಟುವಟಿಕೆ ಆರಂಭಿಸಬೇಕೆಂದು ತಿಳಿಸಲಾಗಿದೆ. ಮಳೆಯಿಂದಾಗಿ ಮಕ್ಕಳು ಶಾಲೆಗೆ ಬರಲಾಗದಿದ್ದರೆ ರಜೆ ಘೋಷಿಸಲು ಸೂಚಿಸಲಾಗಿದೆ.

Also Read  ರಾಜ್ಯದಲ್ಲಿ ಮೋದಿ ಸುನಾಮಿ ಸೃಷ್ಟಿಯಾಗಿದೆ ➤ ಸಿಎಂ ಬೊಮ್ಮಾಯಿ..!       

 

 

 

error: Content is protected !!
Scroll to Top