(ನ್ಯೂಸ್ ಕಡಬ) newskadaba.com ಕಡಬ, ಜ.19. ಚಾಲಕನ ನಿಯಂತ್ರಣ ತಪ್ಪಿದ ಬೋರ್‍ವೆಲ್ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಕಡಬದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಕಳಾರ ಕಡೆಯಿಂದ ಕಡಬಕ್ಕೆ ಆಗಮಿಸುತ್ತಿದ್ದ ಲಾರಿ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡವಾಗಿ ಬಿದ್ದ ಪರಿಣಾಮ ಲಾರಿಯಲ್ಲಿದ್ದ ಮೂವರು ಕಾರ್ಮಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳು ಕಾರ್ಮಿಕರಿಗೆ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.