ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ಮೃತ್ಯು.!

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ,ಮೇ.31 ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿದ್ದ ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೆಯ ವಿದ್ಯಾರ್ಥಿ ಸಾಲಿಹಾತ್ (24) ಹೃದಯಾಘಾತದಿಂದ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಪಡಂಗಡಿ ಪೊಯ್ಯೆಗುಡ್ಡೆ ನಿವಾಸಿ ಆದಂ ಮತ್ತು ಹವ್ವಮ್ಮ ದಂಪತಿಯ ಪುತ್ರಿಯಾಗಿರುವ ಸಾಲಿಹಾತ್ ಒಂದು ವರ್ಷದ ಹಿಂದೆ ವಿವಾಹಿತರಾಗಿದ್ದರು.

ಸದ್ಯ ಚಿಕ್ಕಮಗಳೂರಿನಲ್ಲಿರುವ ಪತಿ ಮನೆಯಲ್ಲಿದ್ದರು. ಹೃದಯ ನೋವಿನ ಕಾರಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ವೈದ್ಯರು ಹೃದಯಾಘಾತ ಎಂದು ದೃಢಪಡಿಸಿದ್ದಾರೆ.

Also Read  ಮಂಗಳೂರಿನಲ್ಲಿ ತಂಗಿದ ಪ್ರಧಾನಿ ಮೋದಿ ► ಬಿಜೆಪಿ ಕಾರ್ಯಕರ್ತರೊಂದಿಗೆ ಸಂಭ್ರಮಾಚರಣೆ

 

 

error: Content is protected !!
Scroll to Top