(ನ್ಯೂಸ್ ಕಡಬ)newskadaba.com ಕಡಬ, ಮೇ. 31. ಸೈಂಟ್ ಜೋಕಿಮ್ ವಿದ್ಯಾ ಸಂಸ್ಥೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಆಚರಿಸಲಾಯಿತು. ಸೈಂಟ್ ಜೋಕಿಮ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂ|| ಪಾವ್ಲ್ ಪ್ರಕಾಶ್ ಡಿ,ಸೋಜ ಅವರು ಅಧ್ಯಕ್ಷತೆಯನ್ನು ವಹಿಸಿಕೊಂಡು ಪ್ರಾರಂಭೋತ್ಸವದ ಉದ್ಘಾಟನೆಯನ್ನು ನೆರವೇರಿಸಿದರು .ಮೌಲ್ಯಯುತ ಶಿಕ್ಷಣದ ಮೂಲಕ ಸಶಕ್ತ ನಾಗರಿಕ ಸಮಾಜವನ್ನು ರೂಪುಗೊಳಿಸುವುದು ಪ್ರತಿಯೊಂದು ಶಿಕ್ಷಣ ಸಂಸ್ಥೆಗಳ ಧ್ಯೇಯವಾಗಬೇಕು; ಜಾತಿ, ಧರ್ಮ, ಜನಾಂಗ, ವರ್ಗ ತಾರತಮ್ಯಗಳನ್ನು ಮರೆತು ಭಾರತೀಯರೆಲ್ಲರೂ ಒಂದೇ ಎಂಬ ಭಾವೈಕ್ಯತೆಯ ಮನೋಭಾವನೆಯಿಂದ ಸಮನ್ವಯದ ಶಿಕ್ಷಣವನ್ನು ನಮ್ಮ ಶಿಕ್ಷಣ ಸಂಸ್ಥೆ ನೀಡಲು ಬದ್ಧವಾಗಿದೆ ಎಂದು ಹೇಳಿ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು .
ಸಂಸ್ಥೆಗೆ ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಪುಷ್ಪ ನೀಡುವ ಮೂಲಕ ಸ್ವಾಗತಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಸೈಂಟ್ ಜೋಕಿಮ್ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಡೆನ್ನಿಸ್ ಫೆರ್ನಾಂಡೀಸ್, ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂ|| ಅಮಿತ್ ಪ್ರಕಾಶ್ ರೋಡ್ರಿಗಸ್, ಸೈಂಟ್ ಜೋಕಿಮ್ ಕಾಲೇಜು ಪ್ರಾಚಾರ್ಯರಾದ ಕಿರಣ್ ಕುಮಾರ್ ,ಸೈಂಟ್ ಜೋಕಿಮ್ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಹಿಲ್ಡಾ ರೋಡ್ರಿಗಸ್ ,ಸೈಂಟ್ ಜೋಕಿಮ್ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶ್ರೀಲತಾ ಉಪಸ್ಥಿತರಿದ್ದರು.
ಸೈಂಟ್ ಜೋಕಿಮ್ ಪ್ರಾಥಮಿಕ ಶಾಲಾ ಶಿಕ್ಷಕಿ ಮೆಟಿಲ್ಡಾ ಆಲ್ವಾರಿಸ್ ಸ್ವಾಗತಿಸಿ, ಸೈಂಟ್ ಜೋಕಿಮ್ ಪ್ರೌಢಶಾಲಾ ಶಿಕ್ಷಕಿ ಶ್ರೀಮತಿ ಪೂರ್ಣಿಮಾ ವಂದಿಸಿದರು. ಸೈಂಟ್ ಜೋಕಿಮ್ ಕಾಲೇಜು ಉಪನ್ಯಾಸಕ ರಾಜೇಶ್. ಎನ್. ಕಾರ್ಯಕ್ರಮ ನಿರೂಪಿಸಿದರು .ಉದ್ಘಾಟನಾ ಕಾರ್ಯಕ್ರಮದ ನಂತರ ಶೈಕ್ಷಣಿಕ ಸಂದೇಶವನ್ನು ಸಾರುವ ಮೆರವಣಿಗೆಯನ್ನು ಕಡಬ ನಗರದಲ್ಲಿ ಹಮ್ಮಿಕೊಳ್ಳಲಾಯಿತು.