ಸುಳ್ಯಪದವು: ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯಪದವು, ಜೂ. 05. ಮರದ ಟಿಪ್ಪರ್ ಲಾರಿಗೆ ಲೋಡ್ ಮಾಡುತ್ತಿದ್ದ ವೇಳೆ ಮರದ ದಿಮ್ಮಿ ಮೈ ಮೇಲೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ನಡೆದಿದೆ.

ಮೃತ ವ್ಯಕ್ತಿಯನ್ನು ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳ ನಿವಾಸಿ ಗೋಪಾಲಕೃಷ್ಣ ಎಂದು ಗುರುತಿಸಲಾಗಿದೆ. ಇವರು ತನ್ನ ಮನೆ ಸಮೀಪವಿರುವ ಮಾವಿನ ಮರದ ದಿಮ್ಮಿಗಳನ್ನು ಜೆಸಿಬಿ ಮೂಲಕ ಟಿಪ್ಪರ್ ವಾಹನಕ್ಕೆ ಲೋಡ್ ಮಾಡುತ್ತಿದ್ದ ವೇಳೆ, ಟಿಪ್ಪರ್ ವಾಹನದ ಹಿಂದಿನ ಬಾಗಿಲನ್ನು ಸರಿಪಡಿಸುವ ಸಂದರ್ಭದಲ್ಲಿ ಮರದ ದಿಮ್ಮಿ ಹಿಂದಕ್ಕೆ ಬಂದು ಮೈಮೇಲೆ ಬಿದ್ದಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Also Read  ಅನ್ಯಕೋಮಿನ ಜೋಡಿ ಲಾಡ್ಜ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

error: Content is protected !!
Scroll to Top