(ನ್ಯೂಸ್ ಕಡಬ) newskadaba.com ಕಡಬ, ಜೂ.04. ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಅಭಿನಂದಿಸಲಾಯಿತು.
ಶಾಸಕಿಯಾದ ಬಳಿಕ ಇದೇ ಮೊದಲ ಬಾರಿಗೆ ಕಡಬಕ್ಕೆ ಆಗಮಿಸಿದ ಅವರಿಗೆ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ಎನ್.ಕೆ., ಸ್ಥಾಪಕಾಧ್ಯಕ್ಷರಾದ ಬಾಲಕೃಷ್ಣ ಕೊಯಿಲ, ಕಾರ್ಯದರ್ಶಿ ವಿಜಯ ಕುಮಾರ್, ಸದಸ್ಯರಾದ ಪ್ರವೀಣ್ ರಾಜ್ ಕೊಯಿಲ, ಪ್ರಕಾಶ್ ಕೋಡಿಂಬಾಳ ಹಾಗೂ ದಿವಾಕರ ಎಂ. ಉಪಸ್ಥಿತರಿದ್ದರು.