ಬೆಳ್ತಂಗಡಿ: ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 05. ಬಸ್‌ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.

ಮೃತ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಗುಂಡಿ ನಿವಾಸಿ ಇರ್ಫಾನ್ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದಲ್ಲಿದ್ದ ಇನ್ನೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಧರ್ಮಸ್ಥಳದಿಂದ ಹೋಗುತ್ತಿದ್ದ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದ್ದು, ಈ ಸಂದರ್ಭ ದ್ವಿಚಕ್ರ ವಾಹನ ಸವಾರ ಬಸ್ಸಿನ ಅಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top