ಜುಲೈ 07ರಂದು ರಾಜ್ಯ ಬಜೆಟ್ ಮಂಡನೆ ➤ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ದಾವಣಗೆರೆ, ಜೂ. 05. ಬರುವ ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, ಜು. 07ರಂದು ಬಜೆಟ್ ಮಂಡನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ, ಹಣಕಾಸು ಇಲಾಖೆ ಸಚಿವ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ಅಧಿವೇಶನದ ಮೊದಲ ದಿನ ರಾಜ್ಯಪಾಲರು ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡುವರು. ರಾಜ್ಯಪಾಲರ ಭಾಷಣದ ಕುರಿತು ಚರ್ಚೆ ನಡೆದ ಬಳಿಕ ಜು. 07 ರ ಶುಕ್ರವಾರದಂದು ಬಜೆಟ್ ಮಂಡನೆ ಮಾಡಲಾಗುವುದು ಎಂದರು. ಇನ್ನು ಈ ವಿಚಾರವಾಗಿ ಪೂರ್ವಭಾವಿ ಸಭೆಗಳು ನಡೆದಿಲ್ಲ. ‌ಹಾಗಾಗಿ ಈಗಲೇ ಬಜೆಟ್ ಗಾತ್ರದ ಬಗ್ಗೆ ನಿಖರವಾಗಿ ಹೇಳಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

Also Read  ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅದಾನಿ ಗುತ್ತಿಗೆ ಪ್ರಶ್ನಿಸಿ ಕೆಂದ್ರಕ್ಕೆ ರಾಜ್ಯ ಹೈಕೋರ್ಟ್ ನೋಟಿಸ್

error: Content is protected !!
Scroll to Top