ಇಬ್ಬರು ಮಕ್ಕಳನ್ನು ಬಿಟ್ಟು ನಾಪತ್ತೆಯಾದ ದಂಪತಿ – ತಾಯಿಯ ಬರುವಿಕೆಯ ನಿರೀಕ್ಷೆಯಲ್ಲಿ ಒಂದು ತಿಂಗಳ ಹಸುಗೂಸು

ಉಪ್ಪಿನಂಗಡಿ, ಜೂ.06. ಮನೆಯೊಂದರಲ್ಲಿ ತಮ್ಮ ಒಂದು ತಿಂಗಳ ಹಸುಗೂಸು ಸಹಿತ ಇಬ್ಬರು ಮಕ್ಕಳನ್ನು ಬಿಟ್ಟು ನಾಪತ್ತೆಯಾಗಿರುವ ಹೆತ್ತವರ ಪತ್ತೆಗಾಗಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು, ಈ ಮಕ್ಕಳನ್ನು ಪುತ್ತೂರಿನ ರಾಮಕೃಷ್ಣಾಶ್ರಮಕ್ಕೆ ಒಪ್ಪಿಸಿದ ಘಟನೆ ಕರಾಯದಲ್ಲಿ ನಡೆದಿರುವುದು ವರದಿಯಾಗಿದೆ.

ಬೆಳ್ತಂಗಡಿ ತಾಲೂಕು ಕರಾಯ ಪರಿಸರದಲ್ಲಿ ಅಲೆಮಾರಿ ಜನಾಂಗದ ದಂಪತಿ ಬುಟ್ಟಿ ಹೆಣೆಯುವ ಕಾಯಕದೊಂದಿಗೆ ಆಗಾಗ ಕಾಣಿಸಿಕೊಂಡು ಪರಿಸರದ ನಿವಾಸಿಗರ ವಿಶ್ವಾಸ ಗಳಿಸಿದ್ದರು. ಮದ್ಯವ್ಯಸನಿಗಳಾದ ಇವರು ಅಲ್ಲಲ್ಲಿ ಮಲಗಿಕೊಂಡು ಅವ್ಯವಸ್ಥಿತ ಜೀವನ ನಡೆಸುತ್ತಿದ್ದರು. ದಂಪತಿಗೆ ದಿನೇಶ ಎಂಬ ನಾಲ್ಕು ವರ್ಷದ ಮಗನಿದ್ದು, ಒಂದು ತಿಂಗಳ ಹಿಂದೆಯಷ್ಟೇ ಹೆಣ್ಣು ಮಗು ಜನಿಸಿತ್ತು. ಈ ಎರಡು ಮಕ್ಕಳನ್ನು ಜೂ.2ರಂದು ಕರಾಯ ಗ್ರಾಮದ ಫಾತಿಮಾ ಎಂಬಾಕೆಯ ಮನೆಯಲ್ಲಿ ಬಿಟ್ಟು ನಾವು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಹೋಗಿ ಬರುತ್ತೇವೆ ಎಂದು ಈ ದಂಪತಿ ತಿಳಿಸಿದ್ದರೆನ್ನಲಾಗಿದೆ. ಮಾನವೀಯತೆ ಮೆರೆದ ಫಾತಿಮಾ ಅವರು ಇದಕ್ಕೆ ಒಪ್ಪಿಕೊಂಡಿದ್ದರು.

Also Read  ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ➤ ಬಿಳಿನೆಲೆಯಲ್ಲಿ ವಿಶೇಷ ಪೂಜೆ , ಕೈಕಂಬದಲ್ಲಿ ಅಶ್ವತ್ಥ ಗಿಡ ನೆಟ್ಟ ಯುವಕರು

ಆದರೆ ಆ ಬಳಿಕ ಈ ದಂಪತಿಯ ಪತ್ತೆಯಿರಲಿಲ್ಲ. ಒಂದು ತಿಂಗಳ ಹಸುಗೂಸು ಸಹಿತ ಇಬ್ಬರು ಮಕ್ಕಳ ಲಾಲನೆ ಪಾಲನೆ ಮಾಡಿದ ಫಾತಿಮಾರು 2 ದಿನ ಕಳೆದರೂ ಹೆತ್ತವರು ಕಾಣಿಸಿಕೊಳ್ಳದೇ ಹೋದಾಗ ಕಳವಳಗೊಂಡು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳ ಗಮನಕ್ಕೆ ತಂದು ಮಕ್ಕಳನ್ನು ರವಿವಾರ ಪುತ್ತೂರಿನ ರಾಮಕೃಷ್ಣಾಶ್ರಮಕ್ಕೆ ಒಪ್ಪಿಸಿದರು. ಮಕ್ಕಳನ್ನು ಬಿಟ್ಟು ಹೋಗಿ ಮೂರು ದಿನವಾದರೂ ಹೆತ್ತವರ ಪತ್ತೆ ಇಲ್ಲದಿರುವುದನ್ನು ಗಮನಿಸಿದ ಫಾತಿಮಾ ಸೋಮವಾರ ಉಪ್ಪಿ ನಂಗಡಿ ಪೊಲೀಸರಿಗೆ ದೂರು ನೀಡಿ, ಮಕ್ಕಳನ್ನು ತನ್ನ ಮನೆಯಲ್ಲಿ ಬಿಟ್ಟು ಹೋಗಿರುವ ದಂಪತಿಯನ್ನು ಪತ್ತೆ ಹಚ್ಚಲು ವಿನಂತಿಸಿದ್ದಾರೆ. ದಂಪತಿಯ ಹೈಕಿ ಗಂಡಸಿನ ಹೆಸರು ತಿಳಿದಿಲ್ಲವೆಂದೂ, ಮಹಿಳೆಯ ಹೆಸರು ಆಕೆಯ ಮಗ ತಿಳಿಸಿದ ರೀತಿಯಲ್ಲಿ ಲೀಲಾ ಎಂದಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Also Read  ಮಂಗಳೂರಿನಲ್ಲಿ ಭೀಕರ ಅಪಘಾತ - ವಿದ್ಯಾರ್ಥಿಗಳು ಪವಾಡ ಸದೃಶವಾಗಿ ಪಾರು

ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

error: Content is protected !!
Scroll to Top