ಮಂಗಳೂರು: ಐಫೋನ್ ಗೆದ್ದಿರುವುದಾಗಿ ಹೇಳಿ ವಿದ್ಯಾರ್ಥಿನಿಗೆ ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 06. ಬಹುಮಾನ ಗೆದ್ದಿರುವುದಾಗಿ ಕರೆ ಮಾಡಿದ್ದ ವ್ಯಕ್ತಿಯೋರ್ವ, ವೈದ್ಯಕೀಯ ವಿದ್ಯಾರ್ಥಿನಿಗೆ ವಂಚಿಸಿರುವ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೂ. 03ರಂದು ಅಪರಿಚಿತನೋರ್ವ ಕರೆ ಮಾಡಿ ‘ನೀವು ಐಫೋನ್ ಪ್ರೊ-12 ಗೆದ್ದಿದ್ದೀರಿ. ಅದನ್ನು ಕಳುಹಿಸಿಕೊಡಲು ಜಿಎಸ್‌ಟಿ ಪಾವತಿಸಬೇಕು’ ಎಂದು ಹೇಳಿದ್ದ. ಅದನ್ನು ನಂಬಿದ ವ್ಯಕ್ತಿ ಗೂಗಲ್‌ಪೇ ಮೂಲಕ ಹಂತ ಹಂತವಾಗಿ 98,972 ರೂ. ಕಳುಹಿಸಿದ್ದು, ಬಳಿಕ ಅಪರಿಚಿತ ವ್ಯಕ್ತಿ ಮತ್ತಷ್ಟು ಹಣವನ್ನು ಕಳುಹಿಸುವಂತೆ ಸೂಚಿಸಿದ ಎಂದು ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದಾರೆ.

Also Read  ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಜ್ಯದಾದ್ಯಂತ ಚಕ್ಕಾ ಜಾಮ್...! ➤ ಪೊಲೀಸ್ ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ

error: Content is protected !!
Scroll to Top