ಲೈಟ್‌ನೊಳಗೆ ಬಚ್ಚಿಟ್ಟು ಚಿನ್ನ ಸಾಗಾಟ

(ನ್ಯೂಸ್ ಕಡಬ)newskadaba@gmail.comಕಾಸರಗೋಡು,  ( ಜೂ 06) ಅಕ್ರಮ ಚಿನ್ನ ಸಾಗಾಟಕ್ಕೆ ಸಂಬಂಧಪಟ್ಟಂತೆ ಓರ್ವನನ್ನು ಡಿವೈಎಸ್ಪಿಪಿ ಬಾಲಕೃಷ್ಣನ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ.

ಇಂದು ಬೆಳಿಗ್ಗೆ ಬೇಕಲ ಸಮೀಪದ ಹೊಸಕೋಟೆ ಎಂಬಲ್ಲಿ ವಾಹನ ತಡೆದು ತಪಾಸಣೆ ನಡೆಸಿದಾಗ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಚಿತ್ತಾರಿಯ ನಿಜಾರ್ (36) ಎಂಬಾತನನ್ನು ಬಂಧಿಸಲಾಗಿದೆ.

ಕಾರಿನಲ್ಲಿದ್ದ 858 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಕಣ್ಣೂರು ವಿಮಾನ ನಿಲ್ದಾಣದಲ್ಲಿ ಇಳಿದು ಕಾರಿನಲ್ಲಿ ಬರುತ್ತಿದ್ದಾಗ ತಪಾಸಣೆ ನಡೆಸಿದಾಗ, ಬ್ಯಾಗ್ ನಲ್ಲಿ ಕಂಡುಬಂದಿದೆ ಎಂದು ವರದಿ ಯಾಗಿದೆ.

Also Read  ಕರಾವಳಿಯಾದ್ಯಂತ ಸಂಭ್ರಮದ ನಾಗರ ಪಂಚಮಿ ಆಚರಣೆ

 

 

 

error: Content is protected !!
Scroll to Top