ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ವಿರುದ್ದ ಕೋರ್ಟ್ ಮೆಟ್ಟಿಲೇರಿದ ಬಿಜೆಪಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 08. ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಷರತ್ತು ಹಾಕಿ ಜನರಿಗೆ ಮೋಸ ಮಾಡಿದೆ ಎಂದು ಆರೋಪಿಸಿದ ಬಿಜೆಪಿಯು ಇದೀಗ ಕೋರ್ಟ್‌ ಮೊರೆ ಹೋಗಲು ನಿರ್ಧರಿಸಿದೆ.

ಕಾಂಗ್ರೆಸ್ ಸರಕಾರವು ಜನತೆಗೆ ಉಚಿತ ಆಮಿಷ ಕೊಟ್ಟು ಅಧಿಕಾರಕ್ಕೆ ಬಂದಿದೆ. ತೆರಿಗೆ ಹಣ ಖರ್ಚು ಮಾಡಿ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಸರಿಯಾಗಿ ತಲುಪಿಸದ ಕಾರಣ ಅವುಗಳನ್ನು ರದ್ದುಗೊಳಿಸಬೇಕು. ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಕಾಂಗ್ರೆಸ್‌ ನಾಯಕರ ವಿರುದ್ಧ ಕೋರ್ಟ್‌ ಮೆಟ್ಟಿಲೇರಲು ತೀರ್ಮಾನಿಸಿರುವುದಾಗಿ ಮೂಲಗಳು ತಿಳಿಸಿವೆ. ಗ್ಯಾರಂಟಿ ಘೋಷಣೆ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಈಗ ಷರತ್ತುಗಳನ್ನು ಹಾಕಿದ್ದು, ಹೀಗಾಗಿ ಇಡೀ ಚುನಾವಣಾ ಪ್ರಕ್ರಿಯೆಯನ್ನೇ ಸ್ಥಗಿತಗೊಳಿಸಿ ಹೊಸದಾಗಿ ಚುನಾವಣೆ ನಡೆಸಬೇಕು ಎಂದು ಬಿಜೆಪಿ ಕಾನೂನಾತ್ಮಕ ಹೋರಾಟ ಮಾಡಲಿದೆ ಎಂದು ತಿಳಿದುಬಂದಿದೆ.

error: Content is protected !!

Join the Group

Join WhatsApp Group