(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 07. ಮಂಗಳೂರು, ಸೇರಿ ರಾಜ್ಯದ ನಾಲ್ಕು ಕಡೆ ಮುಂದಿನ ಐದು ವರ್ಷಗಳಲ್ಲಿ ಹಜ್ ಭವನ ನಿರ್ಮಾಣವಾಗಲಿದೆ ಎಂದು ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
ಬೆಂಗಳೂರಿನ ಯಲಹಂಕದ ಹಜ್ ಭವನದಲ್ಲಿ ನಡೆದ ಹಜ್ ಯಾತ್ರಿಕರ ವಿಮಾನಯಾನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮಂಗಳೂರು, ಕಲಬುರಗಿ, ರಾಯಚೂರು ಹಾಗೂ ಹುಬ್ಬಳ್ಳಿಯಲ್ಲಿ ಹಜ್ ಭವನ ನಿರ್ಮಾಣವಾಗಲಿದೆ. ಸಿದ್ದರಾಮಯ್ಯರು ಹಿಂದಿನ ಬಾರಿ ಸಿಎಂ ಆಗಿದ್ದಾಗ 100 ಕೋಟಿ ಅನುದಾನ ನೀಡಿದ್ದರು. ಈ ಬಾರಿ ಅಧಿಕಾರಕ್ಕೆ ಬಂದ ಎರಡನೇ ದಿನಕ್ಕೆ ಹಜ್ ಭವನ ನಿರ್ಮಾಣಕ್ಕೆ 5 ಕೋಟಿ ರೂ. ಅನುದಾನ ನೀಡಿದ್ದಾರೆ. ಮಾತ್ರವಲ್ಲದೇ ಮುಂದೆ ಒಟ್ಟು 5 ಸಾವಿರ ಕೋಟಿ ಅನುದಾನ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದರು.