ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ➤ ಮೀನುಗಾರರು ಸಮುದ್ರ ತೀರಕ್ಕೆ ತೆರಳದಂತೆ ಹವಾಮಾನಾ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 07. ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯಭಾರ ಕುಸಿತದಿಂದಾಗಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗಾಳಿಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಮುಂದಿನ ನಾಲ್ಕು ದಿನಗಳಲ್ಲಿ ಕರಾಳಿಯಲ್ಲಿ ಭಾರೀ ಮಳೆಯಾಗುವ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಗಳಿವೆ. ಇದರಿಂದ ಮೀನುಗಾರರು, ಪ್ರವಾಸಿಗರು ಹಾಗೂ ನಾಗರೀಕರು ಸಮುದ್ರಕ್ಕೆ ತೆರಳದಂತೆ ಹಾಗೂ ಅಪಾಯಕಾರಿ ವಿದ್ಯುತ್‌ ಕಂಬ, ಮರ, ಕಟ್ಟಡಗಳ ಕೆಳಗೆ ನಿಲ್ಲದಂತೆ ಮತ್ತು ತಗ್ಗು ಪ್ರದೇಶಗಳಲ್ಲಿ, ಪ್ರವಾಹ ಸಂಭವಿಸುವ ಪ್ರದೇಶಗಳ ಜನರು ಮುಂಜಾಗ್ರತೆ ವಹಿಸುವಂತೆ ಜಿಲ್ಲಾಡಳಿತ ಸಲಹೆ ನೀಡಿದೆ. ಜಿಲ್ಲಾಮಟ್ಟದ ಹಾಗೂ ತಾಲೂಕುಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಎಚ್ಚರ ವಹಿಸಬೇಕು ಎಂದು ದ.ಕ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

Also Read  ಮಂಗಳೂರು ವಿಶ್ವ ವಿದ್ಯಾನಿಲಯ ➤ ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಆಹ್ವಾನ

ಕಂಟ್ರೋಲ್‌ ರೂಂ

ವಿಕೋಪಗಳಿಂದ ತೊಂದರೆ ಉಂಟಾದವರಿಗೆ ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ 24×7 ಜಿಲ್ಲಾಮಟ್ಟದಲ್ಲಿ ಕಂಟ್ರೋಲ್‌ ರೂಂ ತೆರೆಯಲಾಗಿದ್ದು, ಉಚಿತ ಸಹಾಯವಾಣಿ ಸಂಖ್ಯೆ 1077 ಅಥವಾ 0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷ ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಕ್ಷಿಣ ಕನ್ನಡದಲ್ಲಿ ತುರ್ತು ಸಂಪರ್ಕಕ್ಕೆ 1077 ಅಥವಾ 0824 2442590 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Also Read  ಕೋಟ್ಯಾಂತರ ಅಭಿಮಾನಿಗಳ ಕಣ್ಣೀರ ವಿದಾಯ ➤ ಭೂಮಿ ತಾಯಿಯ ಮಡಿಲು ಸೇರಿದ ಗಾನಯೋಗಿ

error: Content is protected !!
Scroll to Top