ಡಿಪ್ಲೊಮಾ ಕೋರ್ಸ್ ಗಳಿಗೆ ಆಫ್ ಲೈನ್ ನಲ್ಲಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 07. 2023-24ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ 2 ವರ್ಷಗಳ ಐಟಿಐ/ದ್ವೀತಿಯ ಪಿಯುಸಿ (ವಿಜ್ಞಾನ) ದ್ವಿತೀಯ ಪಿಯುಸಿ (ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮೂಲಕ 2ನೇ ವರ್ಷ, 3ನೇ ಸಮಿಸ್ಟರ್ ಡಿಪ್ಲೋಮಾ ಕೋರ್ಸ್‍ಗಳಿಗೆ ಆಫ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಅಭ್ಯರ್ಥಿಗಳ ಮೆರಿಟ್‍ ಗೆ ಅನುಗುಣವಾಗಿ ಆಫ್‍ಲೈನ್ ಮೂಲಕ ಸೀಟು ಹಂಚಿಕೆ ಮಾಡಲಾಗುವುದು.  ಅರ್ಹ ಆಸಕ್ತ ಅಭ್ಯರ್ಥಿಗಳು ಈ ಸಂಸ್ಥೆಯಲ್ಲಿ ಸೂಕ್ತ ಮೂಲ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.


ಆಫ್‍ಲೈನ್ ಪ್ರವೇಶಾತಿ ಪ್ರಕ್ರಿಯೆಯ ವಿವಿಧ ಹಂತಗಳ ತಾತ್ಕಾಲಿಕ ವೇಳಾಪಟ್ಟಿ:     

ಇಲಾಖೆಯ ಅಧಿಕೃತ ವೆಬ್‍ಸೈಟ್‍ ಗಳಿಂದ ಅರ್ಜಿ ಡೌನ್‍ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಯನ್ನು ಪ್ರವೇಶ ಬಯಸುವ ಸಂಸ್ಥೆಯ ಪ್ರಾಂಶುಪಾಲರಿಗೆ ಸಲ್ಲಿಸಲು ಜೂ. 20ರಂದು ಕೊನೆಯ ದಿನ. ಅರ್ಹ ಅಭ್ಯರ್ಥಿಗಳ ಮೆರಿಟ್ ಪಟ್ಟಿ ಪ್ರಕಟಣೆ ದಿನ ಜೂ. 21, ಸೀಟು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ನಿಗದಿತ ಶುಲ್ಕದೊಂದಿಗೆ ಪ್ರವೇಶ ಪಡೆಯಲು ಜೂ. 22 ಪ್ರಾರಂಭ ಹಾಗೂ ಜೂ. 24ರಂದು ಸಲ್ಲಿಸಲು ಕೊನೆಯ ದಿನವಾಗಿದೆ. ಸೀಟುಗಳು ಭರ್ತಿಯಾಗದೇ ಉಳಿಕೆಯಾದಲ್ಲಿ ಪ್ರಾಂಶುಪಾಲರ ಹಂತದಲ್ಲಿಯೇ ಜೂ. 26ರಿಂದ 30ರ ವರೆಗೆ ಸೀಟು ಹಂಚಿಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್ ಸೈಟ್ www.dtek.kar.nic.in ಅಥವಾ ನಗರದ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್‍ನ ಕಚೇರಿ ದೂರವಾಣಿ ಸಂಖ್ಯೆ: 0824- 2211636, 3500437ಗೆ ಕರೆ ಮಾಡುವಂತೆ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಪುತ್ತೂರಿನ ಯುವಕ ಬಂಟ್ವಾಳದಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

error: Content is protected !!
Scroll to Top