ಪರಿಸರ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯ ➤ ಸಿಎ ಶಾಂತಾರಾಮ ಶೆಟ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 07. ಜಿಲ್ಲಾ ಸಮಿತಿ ವತಿಯಿಂದ ರೆಡ್‍ಕ್ರಾಸ್ ಆಡಳಿತ ಕಚೇರಿಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಮತ್ತು ಕೃಷಿಕರಿಗೆ ಹಣ್ಣಿನ ಸಸಿಗಳನ್ನು ವಿತರಿಸಲಾಯಿತು.

ರೆಡ್‍ಕ್ರಾಸ್ ಜಿಲ್ಲಾ ಸಮಿತಿ ಅಧ್ಯಕ್ಷ ಸಿ.ಎ. ಶಾಂತಾರಾಮ್ ಶೆಟ್ಟಿ ಮಾತನಾಡಿ, ಪರಿಸರದ ಬಗ್ಗೆ ಪ್ರತಿಯೊಬ್ಬರಲ್ಲೂ ಕಾಳಜಿ ಮೂಡಿಸುವುದು ವಿಶ್ವ ಪರಿಸರ ದಿನಾಚರಣೆಯ ಉದ್ದೇಶವಾಗಿದೆ. ಸುಸ್ಥಿರ ಭವಿಷ್ಯಕ್ಕಾಗಿ ಪರಿಸರ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು.ಪ್ಲಾಸ್ಟಿಕ್ ಮಾಲಿನ್ಯ ಪರಿಸರಕ್ಕೆ ಮಾರಕವಾಗಿದ್ದು, ಈ ಬಗ್ಗೆ ಜನ ಜಾಗೃತಿ ಮೂಡಿಸಲು ರೆಡ್ ಕ್ರಾಸ್ ವತಿಯಿಂದಲೂ  ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು. ದ.ಕ. ಜಿಲ್ಲಾ ರೆಡ್ ಕ್ರಾಸ್‍ನ ಉಪಾಧ್ಯಕ್ಷ ಡಾ. ಸತೀಶ್ ರಾವ್,  ಆಡಳಿತ ಸಮಿತಿ ನಿರ್ದೇಶಕರಾದ ಪುಷ್ಪರಾಜ್ ಜೈನ್, ಗುರುದತ್ ಎಂ. ನಾಯಕ್, ವಿಠಲ ಎ., ಪಿ.ಬಿ. ಹರೀಶ್ ರೈ, ಡಾ. ಸುಮನಾ ಬೋಳೂರು, ಸಚೇತ್ ಸುವರ್ಣ ಉಪಸ್ಥಿತರಿದ್ದರು. ಕಾರ್ಯದರ್ಶಿ ಸಂಜಯ್  ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Also Read  ಬಾಂಗ್ಲಾದಲ್ಲಿ ಬಂಧಿಸಲ್ಪಟ್ಟ ಚಿನ್ಮಯ ಕೃಷ್ಣದಾಸ ಪ್ರಭು ಬಿಡುಗಡೆಗೆ ಒತ್ತಾಯಿಸಿ ಮಂಗಳೂರಿನಲ್ಲಿ ಪ್ರತಿಭಟನೆ

error: Content is protected !!
Scroll to Top