ಬಿಳಿನೆಲೆ: ವಿಷ ಸೇವಿಸಿದ್ದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜ.20. ಕೃಷಿಗೆಂದು ತಂದಿರಿಸಲಾಗಿದ್ದ ಕೀಟನಾಶಕವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಿಳಿನೆಲೆ ನಿವಾಸಿ ಶುಕ್ರವಾರದಂದು ಮೃತಪಟ್ಟಿದ್ದಾರೆ.

ಮೃತರನ್ನು ಬಿಳಿನೆಲೆ ಬೈಲು ನಿವಾಸಿ ಪುಟ್ಟಣ್ಣ ಗೌಡ (65) ಎಂದು ಗುರುತಿಸಲಾಗಿದೆ. ಇವರು ಜನವರಿ 05 ರಂದು ತನ್ನ ಮನೆಯಲ್ಲಿ ಕೃಷಿಗೆಂದು ತಂದಿರಿಸಲಾಗಿದ್ದ ಕೀಟನಾಶಕವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ,‌ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರದಂದು ಮೃತಪಟ್ಟಿದ್ದಾರೆ.

Scroll to Top