ಅಲೋಕ್ ಕುಮಾರ್ ಸಹಿತ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 08. ಅಲೋಕ್ ಕುಮಾರ್​ ಸೇರಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಕಾನೂನು ಮತ್ತು ಸುವ್ಯವಸ್ಥೆಯ ಅಲೋಕ್ ಕುಮಾರ್​ ಅವರನ್ನು ADGP ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಉಮೇಶ್ ಕುಮಾರ್, ADGP ಕ್ರೈಂ & ಟೆಕ್ನಿಕಲ್ ಸರ್ವಿಸ್​, ಆರ್ ಹಿತೇಂದ್ರ, ADGP ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸೌಮೇಂದು ಮುಖರ್ಜಿ, ADGP ಪೊಲೀಸ್ ಆಡಳಿತ ವಿಭಾಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಕಪಿಲ್ ಮೋಹನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈವರೆಗೆ ಈ ಹುದ್ದೆಯನ್ನು ಹೆಚ್ಚುವರಿಯಾಗಿ ಪಂಕಜ್ ಕುಮಾರ್ ಪಾಂಡೆ ಅವರು ನಿಭಾಯಿಸುತ್ತಿದ್ದರು. ಸದ್ಯ ಈ ಸೇವೆಯಿಂದ ಪಂಕಜ್ ಅವರನ್ನು ಮುಕ್ತಿಗೊಳಿಸಲಾಗಿದೆ. ಸಹಕಾರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್ ಎಸ್.ಆರ್. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಶಿಕ್ಷಣ ಇಲಾಖೆ (ಉನ್ನತ ಶಿಕ್ಷಣ) ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಉಮಾಶಂಕರ್ ಎಸ್.ಆರ್. ಅವರ ವರ್ಗಾವಣೆಯಿಂದ ತೆರವಾಗಿದ್ದ ಸಹಕಾರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ಮಂಜುನಾಥ ಪ್ರಸಾದ್ ಎನ್, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಕೆಎಸ್ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕ್ಕುಮಾರ್ ಅವರನ್ನು ಬೆಂಗಳೂರಿನ ಕೃಷಿ ಇಲಾಖೆಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಆದೇಶಿಸಲಾಗಿದೆ. ಈ ಹುದ್ದೆಯನ್ನು ರವಿಶಂಕರ್ ಜೆ ಅವರು ಹೆಚ್ಚುವರಿಯಾಗಿ ನಿಭಾಯಿಸುತ್ತಿದ್ದರು.

Also Read  ಗುತ್ತಿಗಾರು : ಸಿಕ್ಕಿಬಿದ್ದ ಚಿನ್ನದ ಸರವನ್ನು ಮರಳಿಸಿ ಪ್ರಾಮಾಣಿಕತೆ ಮೆರೆದ ಯುವಕ

error: Content is protected !!
Scroll to Top