ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಗಾಂಜಾ ಮಾರಾಟ ಪ್ರಕರಣ ➤ ಬಂಧಿತರಿಗೆ 2 ವರ್ಷ ಜೈಲು ಶಿಕ್ಷೆ ಪ್ರಕಟ – News Kadaba

ಗಾಂಜಾ ಮಾರಾಟ ಪ್ರಕರಣ ➤ ಬಂಧಿತರಿಗೆ 2 ವರ್ಷ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 08. ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ ಎರಡು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50,000ರೂ. ದಂಡ ವಿಧಿಸಿದೆ.

 

ಬಂಧಿತ ಆರೋಪಿಗಳನ್ನು ಹೈದರಬಾದ್ ಮೂಲದ ಮಪಾಲ ಸರಳೇಬೆಟ್ಟು ನಿವಾಸಿ ತಿಪಿರ್ ನೇನಿ ಆದಿತ್ಯ(21) ಹಾಗೂ ತೆಲಂಗಾಣ ರಾಜ್ಯದ ಖಾನಪುರಂ ಮೂಲದ ಮಪಾಲ ಈಶ್ವರನಗರ ನಿವಾಸಿ ಮೊಗಿಲಿ ಹೇಮಂತ್ ರೆಡ್ಡಿ(20) ಎಂದು ಗುರುತಿಸಲಾಗಿದೆ. 2019ರ ಅ. 27ರಂದು ಉಡುಪಿ ನಗರದ ಶಂಕರನಾರಾಯಣ ದೇವಸ್ಥಾನದ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಜಿಲ್ಲಾ ಸೆನ್ ಅಪರಾಧ ಠಾಣೆಯ ಪೊಲೀಸರು ಬಂಧಿಸಿ, ಇವರಿಂದ 4 ಕೆ.ಜಿ. 034ಗ್ರಾಂ ತೂಕದ ಗಾಂಜಾ ಹಾಗೂ ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಈ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಗಿನ ಸೆನ್ ಠಾಣೆಯ ಪೊಲೀಸ್ ನಿರೀಕ್ಷಕ ಸೀತಾರಾಮ ಪಿ. ಪ್ರಕರಣದ ತನಿಖೆ ನಡೆಸಿ, ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಶಾಂತವೀರ ಶಿವಪ್ಪ, ಆರೋಪಿಗಳ ಮೇಲಿನ ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟು, ಇಬ್ಬರು ಆರೋಪಿಗಳಿಗೆ ಎರಡು ವರ್ಷ ಕಠಿಣ ಜೈಲುಶಿಕ್ಷೆ ಮತ್ತು ತಲಾ 50ಸಾವಿರ ರೂ. ದಂಡ ಹಾಗೂ ದಂಡ ವಿಧಿಸಿದ್ದು, ತಪ್ಪಿದಲ್ಲಿ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆಯನ್ನು ವಿಧಿಸಿ ಆದೇಶಿಸಿದ್ದಾರೆ.

Scroll to Top