ಕಾರ್ಮಿಕರ ಮೇಲೆ ಹರಿದ ಗೂಡ್ಸ್ ರೈಲು ➤6 ಮಂದಿ ಮೃತ್ಯು

(ನ್ಯೂಸ್ ಕಡಬ)newskadba.com ಒಡಿಶಾ, ಜೂ  08 . ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹರಿದು ಆರು ಮಂದಿ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಒಡಿಶಾದ ಜಜ್ಪುರ ಜಿಲ್ಲೆಯಲ್ಲಿ ನಡೆದಿದೆ.

ಜಜ್ಪುರ ಕಿಯೋಂಜರ್ ರೈಲು ನಿಲ್ದಾಣದಲ್ಲಿ ಭಾರಿ ಮಳೆ ಸುರಿಯುತ್ತಿದ್ದ ವೇಳೆ ಕಾರ್ಮಿಕರು ಗೂಡ್ಸ್ ರೈಲಿನ ಕೆಳಗೆ ಆಶ್ರಯ ಪಡೆದಿದ್ದರು. ಈ ವೇಳೆ ರೈಲು ಚಲಿಸಲು ಆರಂಭಿಸಿದೆ.ಇನ್ನು ಗಾಯಗೊಂಡ ಕಾರ್ಮಿಕರನ್ನು ಕಟಕ್ ಎಸ್ ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ದುರದೃಷ್ಟಕರ ಘಟನೆಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

Also Read  ಕಾಲುಜಾರಿ ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು

 

 

 

error: Content is protected !!
Scroll to Top