ಕೊಡಲಿಯಿಂದ ಕಡಿದು ಮಗಳನ್ನೇ ಕೊಂದ ತಂದೆ

(ನ್ಯೂಸ್ ಕಡಬ) newskadaba.com ಕೇರಳ, ಜೂ. 08. ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದ ಹಿನ್ನೆಲೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ತನ್ನ ಮಗಳನ್ನೇ ಕೊಡಲಿಯಿಂದ ಕಡಿದು ಹತ್ಯೆ ಮಾಡಿರುವ ಘಟನೆ ಕೇರಳದ ಆಲಪ್ಪುಳದಲ್ಲಿ ನಡೆದಿದೆ.

ಹತ್ಯೆಗೊಳಗಾದ ಬಾಲಕಿಯನ್ನು ನಕ್ಷತ್ರಾ ಎಂದು ಗುರುತಿಸಲಾಗಿದೆ. ಆರೋಪಿ ಶ್ರೀ ಮಹೇಶನ ಪತ್ನಿಯು ನಾಲ್ಕು ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಆ ಬಳಿಕ ಖಿನ್ನತೆಯಿಂದ ಬಳಲುತ್ತಿದ್ದ ಈತ ಚಿಕಿತ್ಸೆ ಪಡೆಯುತ್ತಿದ್ದನು. ಇದೀಗ ಮಹೇಶ್ ತನ್ನ ಮಗಳು ನಕ್ಷತ್ರಾಳನ್ನು ಬುಧವಾರದಂದು ರಾತ್ರಿ ಸುಮಾರು 8 ಗಂಟೆಯ ಸುಮಾರಿಗೆ ಕೈ ಕೊಡಲಿಯಿಂದ ಕಡಿದಿದ್ದಾನೆ. ನಕ್ಷತ್ರಾಳ ಕಿರುಚಾಟವನ್ನು ಕೇಳಿ ಪಕ್ಕದ ಮನೆಯಲ್ಲಿ ಮಗಳೊಂದಿಗೆ ವಾಸವಿದ್ದ ಮಹೇಶ್ ತಾಯಿ ಸುನಂದಾ ರವರು ಸ್ಥಳಕ್ಕೆ ಧಾವಿಸಿದ್ದು, ಈ ಸಂದರ್ಭ ಮಹೇಶ್, ತಾಯಿ ಮೇಲೆ ಕೂಡಾ ಹಲ್ಲೆ ನಡೆಸಿದ್ದು, ಅವರ ತಲೆ ಮತ್ತು ಕುತ್ತಿಗೆಗೆ ಗಾಯಗಳಾಗಿವೆ. ಇನ್ನು ಘೋರ ಕೃತ್ಯಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ನಕ್ಷತ್ರಾಳ ತಾಯಿ ನಾಲ್ಕು ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಪತ್ನಿಯ ಸಾವಿನ ನಂತರ ಖಿನ್ನತೆಗೆ ಒಳಗಾಗಿದ್ದ ಆತ ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ.

Also Read  ➤ ಆನ್‌ಲೈನ್ ವಂಚನೆ 18.43 ಲಕ್ಷ ರೂ. ಕಳೆದುಕೊಂಡ ಮಂಗಳೂರಿನ ವ್ಯಕ್ತಿ

error: Content is protected !!
Scroll to Top