ಪೊಲೀಸ್ ನಿರೀಕ್ಷಕ ಲಿಂಗರಾಜು ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 08. ನಗರ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಉಪನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದ, ಪ್ರಸ್ತುತ ಚಿತ್ರದುರ್ಗದಲ್ಲಿ ಪೊಲೀಸ್ ನಿರೀಕ್ಷಕರಾಗಿರುವ ಲಿಂಗರಾಜು ಎಂಬವರು ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ.

ಅವರು ಇತ್ತೀಚೆಗೆ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದು, ಆದರೆ ಅಲ್ಲಿ ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Scroll to Top