ಕಲುಷಿತ ನೀರು ಸೇವಿಸಿ 10ರ ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಕೊಪ್ಪಳ, ಜೂ. 08. ಕಲುಷಿತ ನೀರು ಸೇವಿಸಿ 15ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲಾಗಿದ್ದು, ಈ ಪೈಕಿ ಓರ್ವ ಬಾಲಕಿ ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಠಗಿ ತಾಲೂಕಿನ ಬಿಜಕಲ್ ಗ್ರಾಮದಿಂದ ವರದಿಯಾಗಿದೆ.

ಮೃತ ಬಾಲಕಿಯನ್ನು ನಿರ್ಮಲಾ ಈರಪ್ಪ ಬೆಳಗಲ್ (10) ಎಂದು ಗುರುತಿಸಲಾಗಿದೆ. ಬಿಜಕಲ್ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ 15ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಮೃತ ಬಾಲಕಿಗೆ ನಿನ್ನೆ ರಾತ್ರಿ ವಾಂತಿ ಭೇದಿ ಕಾಣಿಸಿಕೊಂಡಿತ್ತು. ರಾತ್ರಿ ವೇಳೆ ಆಸ್ಪತ್ರೆಗೆ ದಾಖಲಿಸಲು ಸಾಧ್ಯವಾಗದ ಕಾರಣ ಬೆಳಗ್ಗೆ ಕರೆದುಕೊಂಡು ಹೋಗುವುದಾಗಿ ನಿರ್ಧರಿಸಿದ್ದರು. ಆದರೆ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ಮುನ್ನವೇ ಆಕೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಕಲುಷಿತ ನೀರು ಸೇವನೆಯಿಂದಲೇ ವಾಂತಿ ಭೇದಿ ಉಂಟಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

Also Read  ಶಕ್ತಿ ನಗರ ವಿದ್ಯಾಸಂಸ್ಥೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆ

error: Content is protected !!
Scroll to Top