ಮಂಗಳೂರು: ಜಿಲ್ಲಾಧಿಕಾರಿ ಕಛೇರಿ ವಾಹನ ಚಾಲಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 09. ದ.ಕ. ಜಿಲ್ಲಾಧಿಕಾರಿ ಕಚೇರಿ ವಾಹನದ ಚಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಗ್ರಕೂಳೂರು ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಬಾಲಕೃಷ್ಣ (58) ಎಂದು ಗುರುತಿಸಲಾಗಿದೆ.  ಬಂಗ್ರಕೂಳೂರು ಮಾಲಾಡಿ ಕೋರ್ಟ್‌ ಬಳಿ ನೆಲೆಸಿದ್ದ ಇವರು ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿದ್ದರು. ಬಳಿಕ ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಗುರುವಾರದಂದು ತನ್ನ ಮನೆಯ ಮಹಡಿಗೆ ಹೋದವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಅವರ ಪುತ್ರ ಚೇತನ್‌ ನೀಡಿದ ದೂರಿನಂತೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Also Read  ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್- ಕಡಬದ ಬ್ಯೂಲಾ ಪಿ.ಟಿ ಅವರಿಗೆ ಬೆಳ್ಳಿ ಪದಕ

error: Content is protected !!
Scroll to Top