(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 09. ಎಲ್ಲಾ 224 ಶಾಸಕರು ಜೂನ್ ತಿಂಗಳ ಅಂತ್ಯದೊಳಗೆ ಆಸ್ತಿ ವಿವರ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿಗಳು ಡೆಡ್ ಲೈನ್ ನೀಡಿದ್ದಾರೆ.
ಜೂನ್ 30 ರೊಳಗೆ ಎಲ್ಲಾ ಶಾಸಕರು ಕಡ್ಡಾಯವಾಗಿ ಆಸ್ತಿ ವಿವರ ಸಲ್ಲಿಸುವಂತೆ ಸರ್ಕಾರದ ಸಿಎಸ್ ಗೆ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಸೂಚನೆ ನೀಡಿದ್ದಾರೆ. ಆದೇಶ ನೀಡಿ 15 ದಿನಗಳು ಕಳೆದರೂ ಶಾಸಕರು ಆಸ್ತಿ ವಿವರ ಸಲ್ಲಿಸಿಲ್ಲ. ಕಳೆದ ಬಾರಿ ಆಸ್ತಿವಿವರ ಸಲ್ಲಿಸಲಾಗಿದೆ ಎಂದು ಸುಮ್ಮನಿರುವಂತಿಲ್ಲ. ಪುನರಾಯ್ಕೆಯಾದ ಶಾಸಕರು ಹಾಗೂ ಹೊಸದಾಗಿ ಶಾಸಕರಾದವರು ಜೂನ್ 30ರೊಳಗೆ ತಮ್ಮ ಆಸ್ತಿ ವಿವರ ಸಲ್ಲಿಸದಿದ್ದರೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.