ವಿದ್ಯಾರ್ಥಿನಿಯ ಜೊತೆ ಅಸಭ್ಯ ವರ್ತನೆ ಆರೋಪ ➤ ಸ್ಥಳೀಯರಿಂದ ಆರೋಪಿಗೆ ಧರ್ಮದೇಟು

(ನ್ಯೂಸ್ ಕಡಬ) newskadaba.com ಕುಂದಾಪುರ, ಜೂ. 10. ನಡೆದುಕೊಂಡು ಬರುತ್ತಿದ್ದ ವಿದ್ಯಾರ್ಥಿನಿಯ ಜೊತೆ ಅಸಭ್ಯವರ್ತನೆ ತೋರಿದ ಯುವಕನಿಗೆ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ಕುಂದಾಪುರದಲ್ಲಿ ವರದಿಯಾಗಿದೆ.

ಆರೋಪಿಯನ್ನು ಬಾರ್ಕೂರು ಮೂಲದ ನಜೀರ್(35) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿಯು ಬೀಜಾಡಿ ರಸ್ತೆ ಮೂಲಕ ಹಾಸ್ಟೆಲ್ ನಿಂದ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭ ಆರೋಪಿ ನಝೀರ್ ಹಿಂದಿನಿಂದ ಬಂದು ಕಿರುಕುಳ ನೀಡಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿದ್ದಾಳೆ. ಇದರಿಂದ ಭಯಗೊಂಡ ವಿದ್ಯಾರ್ಥಿನಿ ಬೊಬ್ಬೆ ಹಾಕಿದ್ದು ಕೂಡಲೇ ಸ್ಥಳದಲ್ಲಿ ಜಮಾಯಿಸಿದ ಸ್ಥಳೀಯರು ಯುವಕನಿಗೆ ಧರ್ಮದೇಟು ನೀಡಿ, ಬಳಿಕ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದು, ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಇಲಿ ಪಾಷಾಣ ಸೇವಿಸಿ ವ್ಯಕ್ತಿ ಮೃತ್ಯು..!

error: Content is protected !!
Scroll to Top