(ನ್ಯೂಸ್ ಕಡಬ)newskadaba.com ಕರ್ನಾಟಕ, ಜೂನ್, 10. ಕೇರಳ ರಾಜ್ಯಕ್ಕೆ ಈಗಾಗಲೇ ಮುಂಗಾರು ಪ್ರವೇಶ ಮಾಡಿದೆ. ಹಾಗೆಯೇ ಕರ್ನಾಟಕಕ್ಕೆ ಇನ್ನೂ ಕೆಲವೇ ಕ್ಷಣಗಳಲ್ಲಿ ಮುಂಗಾರು ಎಂಟ್ರಿ ಕೊಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮತ್ತೊಂದೆಡೆ ಬಿಪರ್‌ಜಾಯ್ ಚಂಡಮಾರುತ ಹಿನ್ನೆಲೆ ರಾಜ್ಯದ ಹಲವೆಡೆ ಇಂದು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶುಕ್ರವಾರ (ಜೂನ್ 09) ಬೆಳಗ್ಗೆಯಿಂದ ಸಂಜೆವರೆಗೂ ಬಿಸಿಲಿನ ವಾತಾವರಣವೇ ಮುಂದುವರೆದಿತ್ತು. ಬಳಿಕ ಜಿನುಗು ಮಳೆ ಪ್ರಾರಂಭ ಆಗಿದ್ದು, ಇದರಿಂದ ರಸ್ತೆಗಳ ಮೇಲೆ ಸ್ವಲ್ಪ ಮಟ್ಟಿಗೆ ನೀರು ಹರಿದಿತ್ತು. ಹಾಗೆಯೇ ನಗರದಲ್ಲಿ ಇಂದು ಬೆಳಗ್ಗೆಯಿಂದಲೂ ಬಿಸಿಲಿನ ವಾತಾವರಣ ಮುಂದುವರೆದಿದೆ. ಜೊತೆಗೆ ಗಾಳಿಯ ಪ್ರಮಾಣವು ಕೂಡ ಹೆಚ್ಚಿದ್ದು, ಸಂಜೆ ವೇಳೆಗೆ ಮಳೆರಾಯ ಅಬ್ಬರಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.