(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 10. 2022-23ನೇ ಸಾಲಿಗೆ 7ನೇ ತರಗತಿ ಮತ್ತು 10ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಉತ್ತೀರ್ಣರಾದ ಆದಿವಾಸಿ ಕೊರಗ ಸಮುದಾಯಕ್ಕೆ ಸೇರಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಮಂಜೂರು ಮಾಡಲು ಜುಲೈ 10ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ನಿಗದಿತ ನಮೂನೆಯ ಅರ್ಜಿಗಳನ್ನು ಸಹಾಯಕ ನಿರ್ದೇಶಕರು (ಗ್ರೇಡ್1 ಮತ್ತು 2), ಸಮಾಜ ಕಲ್ಯಾಣ ಇಲಾಖೆ, ಮಂಗಳೂರು, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕು ಕಚೇರಿಗಳಿಂದ ಪಡೆದು, ಭರ್ತಿ ಮಾಡಿ ಶಾಲಾ ಮುಖ್ಯೋಪಾಧ್ಯಾಯರಿಂದ ಧೃಡೀಕರಿಸಿ, ಅಂಕಪಟ್ಟಿ ಪ್ರತಿ, ಜಾತಿ ಪ್ರಮಾಣ ಪತ್ರದ ಪ್ರತಿ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಿ, ಸಂಬಂಧಪಟ್ಟ ತಾಲೂಕುಗಳ ಸಮಾಜ ಕಲ್ಯಾಣ ಇಲಾಖೆಯ ಕಚೇರಿಗೆ ಸಲ್ಲಿಸುವಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.