(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ. 10. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೊದಲ ವಿಧಾನ ಮಂಡಲದ ಅಧಿವೇಶನ ಜು.3 ರಂದು ಪ್ರಾರಂಭವಾಗಲಿದ್ದು, ಅಂದು ಮಧ್ಯಾಹ್ನ 12 ಗಂಟೆಗೆ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಜು.4ರಿಂದ ಉಭಯ ಸದನಗಳ ಅಧಿಕೃತ ಕಾರ್ಯಕಲಾಪಗಳು ಆರಂಭವಾಗಲಿದ್ದು, 14ರವರೆಗೆ ಅಧಿವೇಶನ ನಡೆಯಲಿದೆ. 7ಕ್ಕೆ ಬಜೆಟ್ ಮಂಡನೆಯಾಗಲಿದ್ದು, ವಿಧಾನ ಪರಿಷತ್ ಅಧಿವೇಶನ ಜು.3ರಿಂದ ಸಮಾವೇಶಗೊಳ್ಳುವಂತೆ ರಾಜ್ಯಪಾಲ ಗೆಹ್ಲೋಟ್ ಅಧಿಸೂಚನೆ ಹೊರಡಿಸಿದ್ದಾರೆ.
Also Read ದ.ಕ, ಉಡುಪಿ ಜಿಲ್ಲೆಯಲ್ಲಿ ಬೆಳೆಯುವ ಕುಚ್ಚಲಕ್ಕಿಯನ್ನು ಪಡಿತರ ಚೀಟಿದಾರರಿಗೆ ವಿತರಿಸಲು ಕೇಂದ್ರ ಚಿಂತನೆ..!