(ನ್ಯೂಸ್ ಕಡಬ) newskadaba.com ಮಂಗಳೂರು, ಜ.20. ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ 2005 ನೇ ಬ್ಯಾಚಿನ ಐಪಿಎಸ್ ಅಧಿಕಾರಿ, ಎನ್ ಕೌಂಟರ್ ಸ್ಪೆಷಲಿಸ್ಟ್, ಬೆಳಗಾವಿ ಜಿಲ್ಲಾ ಎಸ್ಪಿಯಾಗಿದ್ದ ಡಾ| ಬಿ.ಆರ್. ರವಿಕಾಂತೇಗೌಡರವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ನಿರ್ಗಮನ ಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುಧೀರ್ ಕುಮಾರ್ ರೆಡ್ಡಿಯವರನ್ನು ಬೆಳಗಾವಿ ಜಿಲ್ಲಾ ಎಸ್ಪಿಯಾಗಿ ತಕ್ಷಣದಿಂದಲೇ ವರ್ಗಾಯಿಸಿ ರಾಜ್ಯ ಸರಕಾರ ಆದೇಶಿಸಿದೆ.