ನೆಲ್ಯಾಡಿ: ಬೆಳ್ಳಂಬೆಳಗ್ಗೆ ಹೊಳೆಗೆ ಬಿದ್ದ ಕಾರು ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ



(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.11. ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಎರ್ಟಿಗಾ ಕಾರು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆ ಎಂಬಲ್ಲಿ ರಸ್ತೆ ಬದಿಯ ಹೊಳೆಗೆ ಉರುಳಿ ಬಿದ್ದ ಘಟನೆ ಭಾನುವಾರ ಬೆಳಗಿನ ಜಾವ ನಡೆದಿದೆ.







ಘಟನೆಯಲ್ಲಿ ಕಾರಿನಲ್ಲಿದ್ದ ಹೊಸೂರು ನಿವಾಸಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುವನ್ನು ಅಶ್ವಿನಿ ಆಂಬ್ಯುಲೆನ್ಸ್ ಮೂಲಕ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ನೀರಿನಲ್ಲಿ ಮುಳುಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.






 

error: Content is protected !!
Scroll to Top